Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:6 - ಕನ್ನಡ ಸತ್ಯವೇದವು J.V. (BSI)

6 ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆ ಕಾಯ್ ಪವಿತ್ರ್ ಹಾಯ್, ತೆ ಕುತ್ತ್ಯಾಂಚ್ಯಾ ಫಿಡ್ಯಾತ್ ದಿವ್‍ನಕಾಶಿ, ತಿ ಪರ್ತುನ್ ತುಮ್ಕಾ ಚಾವುಕ್ ಫಾಟ್ ಲಾಗ್ತ್ಯಾತ್, ತುಮ್ಚಿ ಮೊತಿಯಾ ಡುಕ್ರಾಂಚ್ಯಾ ಫಿಡ್ಯಾತ್ ಟಾಕುನಕಾಶಿ. ತಿ ತೆಂಕಾ ಪಾಯಾತ್ನಿ ಘಾಲುನ್ ತುಡ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:6
18 ತಿಳಿವುಗಳ ಹೋಲಿಕೆ  

ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಳ್ಳುವ ಹಾಗೆ ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.


ಆ ನಾಯಿಗಳಿಗೆ ಎಚ್ಚರಿಕೆಯಾಗಿರಿ; ದುರ್ಮನಸ್ಸಿನಿಂದ ಕೆಲಸಮಾಡುವವರಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಫೇದನ ಮಾಡುವವರಿಗೆ ಎಚ್ಚರಿಕೆಯಾಗಿರಿ.


ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳುವದಕ್ಕೆ ಹೋಯಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ನಡೆದಿದ್ದಾರೆ.


ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಹಂದಿಯ ಮೂತಿಗೆ ಚಿನ್ನದ ಮೂಗುತಿಯು ಹೇಗೋ ಅವಿವೇಕಳಿಗೆ ಸೌಂದರ್ಯವು ಹಾಗೆ.


ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಎಲ್ಲರ ಮುಂದೆ ಅವಮಾನಪಡಿಸುವವರೂ ಆಗಿದ್ದಾರೆ.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.


ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು