Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:13 - ಕನ್ನಡ ಸತ್ಯವೇದವು J.V. (BSI)

13 ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಯೇಸು ಆ ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನಂತರ ಯೇಸು ಆ ಶತಾಧಿಪತಿಗೆ, “ಹೋಗು, ನೀನು ನಂಬಿದಂತೆಯೇ ನಿನಗಾಗಲಿ,” ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಜೆಜುನ್ ತ್ಯಾ ಅದಿಕಾರ್‍ಯಾಕ್, “ತಿಯಾ ತುಜ್ಯಾ ಘರಾಕ್ ಜಾ, ಅನಿ ತಿಯಾ ವಿಶ್ವಾಸ್ ಕರಲ್ಲ್ಯಾ ಸರ್ಕೆ ಹೊಲ್ಲೆ ರ್‍ಹಾತಾ”. ಮಟ್ಲ್ಯಾನ್. ಅನಿ ತನ್ನಾಚ್ ತ್ಯಾ ಅದಿಕಾರ್‍ಯಾಚೊ ಆಳ್ ಗುನ್ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:13
10 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ - ನಿನ್ನ ಮಗನು ಬದುಕುತ್ತಾನೆ ಹೋಗು ಎಂದು ಉತ್ತರ ಕೊಟ್ಟನು. ಆ ಗೃಹಸ್ಥನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ನಿಮ್ಮ ನಂಬಿಕೆ ಕಡಿಮೆಯಾಗಿರುವದರಿಂದಲೇ ಆಗಲಿಲ್ಲ; ನಿಮಗೆ ಸತ್ಯವಾಗಿ ಹೇಳುತ್ತೇನೆ, ಸಾಸಿವೇಕಾಳಷ್ಟು ನಂಬಿಕೆ ನಿಮಗೆ ಇರುವದಾದರೆ ನೀವು ಈ ಬೆಟ್ಟಕ್ಕೆ -


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಆತನು - ಈ ಮಾತನ್ನು ಹೇಳಿದ್ದರಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಬಿಟ್ಟಿದೆ, ಹೋಗು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು