Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:22 - ಕನ್ನಡ ಸತ್ಯವೇದವು J.V. (BSI)

22 ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಿಕೊಳ್ಳಲಿ. ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಕಾ ಜೆಜುನ್, “ಮರಲ್ಲೆಚ್ ಮರಲ್ಲ್ಯಾಕ್ನಿ ಮಾಟಿ ದಿಂವ್ದಿತ್, ತಿಯಾ ಮಾಜ್ಯಾ ವಾಂಗ್ಡಾ ಯೆ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:22
17 ತಿಳಿವುಗಳ ಹೋಲಿಕೆ  

ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ - ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು ಅಂದನು. ಅದಕ್ಕೆ ಎಲೀಯನು - ಹೋಗು; ನಾನು ನಿನಗೆ ಮಾಡಿದ್ದೇನು ಎಂದು ಉತ್ತರಕೊಟ್ಟನು.


ಶಿಷ್ಯರಲ್ಲಿ ಬೇರೊಬ್ಬನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅನ್ನಲಾಗಿ


ಆತನು [ಅಲ್ಲಿಂದ] ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನ ಹಿಂದೆ ಹೋದನು.


ಆತನು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.


ಆದರೆ ಆತನು ಅವನಿಗೆ - ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು ಎಂದು ಹೇಳಿದನು.


ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು.


ಅವನು ಎಂಥಾ ಸಾವಿನಿಂದ ದೇವರನ್ನು ಮಹಿಮೆಪಡಿಸುವನು ಎಂಬದನ್ನು ಆತನು ಈ ಮಾತಿನಿಂದ ಸೂಚಿಸಿದನು. ಇದನ್ನು ಹೇಳಿ ಆತನು ಅವನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು