ಮತ್ತಾಯ 8:28 - ಕನ್ನಡ ಸತ್ಯವೇದವು J.V. (BSI)28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಜೆಜು ಸಮುಂದರಾಚ್ಯಾ ತಿಕುಲ್ಯಾ ಬಾಜುನ್ ಗೆದರಾ ಮನ್ತಲ್ಯಾ ಜಾಗ್ಯಾಕ್ ಯವ್ನ್ ಪಾವಲ್ಲ್ಯಾ ತನ್ನಾ ಲೊಕಾಕ್ನಿ ಮಾಟಿ ದಿತಲ್ಯಾ ಸಮಾದ್ಯಾನಿತ್ನಾ ದೊಗೆ ಜಾನಾ ಗಿರೆಲಾಗಲ್ಲಿ ಮಾನ್ಸಾ ಭಾಯ್ರ್ ಯೆವ್ನ್ ತೆಕಾ ಭೆಟ್ಲಿ. ತೆನಿ ಲೈ ಭಯನಾಕ್ ಹೊತ್ತ್ಯಾನಿ, ತಸೆಮನುನ್ ಕೊನ್‍ಬಿ ತ್ಯಾ ವಾಟೆನ್ ಫಿರುನ್ ಖೆಳಿನಸಿತ್. ಅಧ್ಯಾಯವನ್ನು ನೋಡಿ |