Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:3 - ಕನ್ನಡ ಸತ್ಯವೇದವು J.V. (BSI)

3 ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುನ್ ಅಪ್ನಾಚೊ ಹಾತ್ ಲಾಂಬ್ ಕರುನ್ ತೆಕಾ ಲಾವ್ಲ್ಯಾನ್, ಅನಿ, “ಮಾಕಾ ಮನ್ ಹಾಯ್, ತಿಯಾ ಪವಿತ್ರ್ ಹೊ”. ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತೆಚೊ ರೊಗ್ ಗುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:3
19 ತಿಳಿವುಗಳ ಹೋಲಿಕೆ  

ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ಹೋಯಿತು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಅವನು ಯೊರ್ದನಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಣುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ನನಗೆ ಮನಸ್ಸುಂಟು; ಶುದ್ಧವಾಗು ಅಂದನು.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.


ನಾಮಾನನು ಇದನ್ನು ಕೇಳಿ ಕೋಪಗೊಂಡು - ಇದೇನು! ಅವನು ಹೇಗೂ ಹೊರಗೆ ಬಂದು ನಿಂತು ತನ್ನ ದೇವರಾದ ಯೆಹೋವನ ಹೆಸರು ಹೇಳಿ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ಆಗ ದೇವರು - ಬೆಳಕಾಗಲಿ ಅನ್ನಲು ಬೆಳಕಾಯಿತು.


ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು.


ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.


ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.


ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ.


ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.


ಮತ್ತಾರೂ ನಡಿಸದ ಕ್ರಿಯೆಗಳನ್ನು ನಾನು ಅವರಲ್ಲಿ ನಡಿಸದೆ ಇದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರು ನೋಡಿದ್ದಾರೆ, ಆದರೂ ನನ್ನ ಮೇಲೆಯೂ ನನ್ನ ತಂದೆಯ ಮೇಲೆಯೂ ದ್ವೇಷಮಾಡಿದ್ದಾರೆ.


ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು.


ನಿನ್ನ ಕೈ ಚಾಚು ಎಂದು ಹೇಳಿದನು; ಅವನು ಚಾಚಿದನು. ಅದು ಸಂಪೂರ್ಣ ವಾಸಿಯಾಗಿ ಮತ್ತೊಂದರ ಹಾಗಾಯಿತು.


ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು