Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:32 - ಕನ್ನಡ ಸತ್ಯವೇದವು J.V. (BSI)

32 ಆತನು - ಹೋಗಿರಿ ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಣುಗಿ ಸತ್ತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಅವುಗಳಿಗೆ, “ಹೋಗಿರಿ” ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೇಸು ಅವುಗಳಿಗೆ, “ಹೋಗಿ” ಅಂದನು. ಆಗ ಆ ದೆವ್ವಗಳು ಅವರಿಬ್ಬರನ್ನು ಬಿಟ್ಟು ಹಂದಿಗಳೊಳಗೆ ಹೋದವು. ಕೂಡಲೇ ಹಂದಿಗಳೆಲ್ಲಾ ಗುಡ್ಡದ ಕೆಳಗೆ ಓಡಿ ಸರೋವರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜೆಜುನ್ ತೆಂಕಾ, “ಜಾವಾ” ಮಟ್ಲ್ಯಾನ್. ತನ್ನಾ ತೆ ಗಿರೆ ಜಾವ್ನ್ ತ್ಯಾ ಡುಕ್ರಾಂಚ್ಯಾ ಹಿಂಡಾತ್ ಗುಸ್ಲೆ ತನ್ನಾ ತೊ ಡುಕ್ರಾಂಚೊ ಸಗ್ಳೊ ಹಿಂಡ್ ಮಡ್ಡಿ ವೈನಾ ಸಮುಂದರಾತ್ ಹುಡಿ ಮಾರುನ್ ಬುಡ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:32
10 ತಿಳಿವುಗಳ ಹೋಲಿಕೆ  

ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು.


ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು.


ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ಆ ದೆವ್ವಗಳು - ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವದಾದರೆ ಆ ಹಂದಿಯ ಗುಂಪಿನೊಳಗೆ ಕಳುಹಿಸಿಕೊಡು ಎಂದು ಬೇಡಿಕೊಂಡವು.


ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದನ್ನೆಲ್ಲಾ ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು