Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:8 - ಕನ್ನಡ ಸತ್ಯವೇದವು J.V. (BSI)

8 ಆ ಶತಾಧಿಪತಿಯು - ಪ್ರಭುವೇ, ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ತ್ಯಾ ಅದಿಕಾರ್‍ಯಾನ್ ಜೆಜುಕ್, “ಧನಿಯಾ, ತಿಯಾ ಮಾಜ್ಯಾ ಘರಾಕ್ ಯೆವ್ಕ್ ಮಿಯಾ ಯೊಗ್ಯ್ ನ್ಹಯ್, ತಿಯಾ ಹಿತ್ನಾಚ್ ಮಾಜೊ ಆಳ್ ಆರಾಮ್ ಹೊಂವ್ದಿ ಮನುನ್ ಸಾಂಗ್ ತೊ ಆರಾಮ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:8
18 ತಿಳಿವುಗಳ ಹೋಲಿಕೆ  

ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ಆತನೇ ನನ್ನ ಹಿಂದೆ ಬರತಕ್ಕವನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ ಅಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಆದರೂ ಮಗನು ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ ಎಂದು ಹೇಳಲು


ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು.


ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ಆತನು ಅವನಿಗೆ - ನಾನು ಬಂದು ಅವನನ್ನು ವಾಸಿಮಾಡುತ್ತೇನೆ ಎಂದು ಹೇಳಿದ್ದಕ್ಕೆ


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು