Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:9 - ಕನ್ನಡ ಸತ್ಯವೇದವು J.V. (BSI)

9 ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ಮಿಯಾಬಿ ಮಾಜ್ಯಾನ್ ಮೊಟ್ಯಾ ಅದಿಕಾರ್‍ಯಾಚ್ಯಾ ಹಾತಿ ಖಾಲ್ತಿ ಹಾಂವ್. ಅನಿ ಮಾಜ್ಯಾ ಹಾತಿ ಖಾಲ್ತಿಬಿ ಲೈ ಸೈನಿಕಾ ಹಾತ್. ಎಕ್ಲ್ಯಾಕ್ ಮಿಯಾ ಜಾ! ಮಟ್ಲ್ಯಾರ್ ತೊ ಜಾತಾ: ಅನಿ ಯೆ! ಮಟ್ಲ್ಯಾರ್ ಯೆತಾ, ಅನಿ ಮಾಜ್ಯಾ ಆಳಾಕ್ ಹೆ ಕರ್! ಮನುನ್ ಸಾಂಗ್ಲ್ಯಾರ್ ತೊ ಕರ್‍ತಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:9
17 ತಿಳಿವುಗಳ ಹೋಲಿಕೆ  

ದಾಸರು ಎಲ್ಲಾದರಲ್ಲಿ ತಮ್ಮ ಯಜಮಾನರಿಗೆ ಅಧೀನರಾಗಿದ್ದು ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ


ದಾಸತ್ವದಲ್ಲಿರುವವರೇ, ಈ ಲೋಕದಲ್ಲಿನ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ; ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ಕರ್ತನಿಗೆ ಭಯಪಡುವವರಾಗಿ ಸರಳಮನಸ್ಸಿನಿಂದ ಕೆಲಸಮಾಡಿರಿ.


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಎಂಬದಾಗಿ ಹೇಳಿಸಿದನು.


ಆತನು ಆಕೆಯ ಬಳಿ ನಿಂತು ಬಾಗಿ ಆ ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ ಸ್ಥಿರವಾಗಿ ನಿಂತಿರುತ್ತವೆ. ಯಾಕಂದರೆ ಸರ್ವವಸ್ತುಗಳೂ ನಿನ್ನನ್ನು ಸೇವಿಸುತ್ತವೆ.


ಆ ಶತಾಧಿಪತಿಯು - ಪ್ರಭುವೇ, ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವದು.


ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು