ಮತ್ತಾಯ 9:18 - ಕನ್ನಡ ಸತ್ಯವೇದವು J.V. (BSI)18 ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಜೆಜು, ಹೆ ಸಾಂಗುನ್ಗೆತುಚ್ ಹೊತ್ತೊ, ತನ್ನಾ ಎಕ್ ಜುದೆವಾಂಚೊ ಅದಿಕಾರಿ ಜೆಜುಕ್ಡೆ ಯೆಲೊ, ಅನಿ ಡೊಗ್ಲಾ ಘಾಲುನ್ ಜೆಜುಕ್, “ ಮಾಜಿ ಲೆಕ್ ಅತ್ತಾ-ಅತ್ತಾಚ್ ಮರ್ಲಿ. ಖರೆ ತಿಯಾ ಯೆವ್ನ್ ತಿಚೆ ವರ್‍ತಿ ಹಾತ್ ಥವ್ ತಿ ಹುರ್ತಾ”. ಮನುಲಾಲೊ. ಅಧ್ಯಾಯವನ್ನು ನೋಡಿ |