ಮತ್ತಾಯ 9:2 - ಕನ್ನಡ ಸತ್ಯವೇದವು J.V. (BSI)2 ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಉಲ್ಲ್ಯಾ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಹಾತ್ರಾನಾ ಸಮೆತ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಂಚೊ ವಿಶ್ವಾಸ್ ಬಗುನ್ ಜೆಜುನ್ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, “ಮಾಜ್ಯಾ ಪೊರಾ! ಧೈರೊ ಘೆ! ತುಜಿ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |