Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:20 - ಕನ್ನಡ ಸತ್ಯವೇದವು J.V. (BSI)

20 ಅಷ್ಟರಲ್ಲಿ ಹನ್ನೆರಡು ವರುಷದಿಂದ ರಕ್ತ ಕುಸುಮ ರೋಗವಿದ್ದ ಒಬ್ಬ ಹೆಂಗಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹನ್ನೆರಡು ವರ್ಷಗಳಿಂದ ರಕ್ತಸ್ರಾವ ಕಾಯಿಲೆ ಹೊಂದಿದ್ದ ಒಬ್ಬ ಹೆಂಗಸು ಅಲ್ಲಿದ್ದಳು. ಆ ಹೆಂಗಸು ಯೇಸುವಿನ ಹಿಂದೆಯೇ ಬಂದು ಆತನ ಮೇಲಂಗಿಯ ತುದಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬಾರಾ ವರ್ಸಾಕ್ನಾ ರಗಾತ್ ಜಾತಲೊ ರೊಗ್ ಹೊತ್ತಿ ಎಕ್ ಬಾಯ್ಕೊಮನುಸ್ ಜೆಜುಚ್ಯಾ ಫಾಟ್ನಾ ಯೆಲಿ ಅನಿ ತೆನಿ ತೆಚ್ಯಾ ಕಪ್ಡ್ಯಾಂಚ್ಯಾ ತುದಿಚ್ಯಾ ಘೊಂಡ್ಯಾಕ್ ಅಪಡ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:20
12 ತಿಳಿವುಗಳ ಹೋಲಿಕೆ  

ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.


ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ಪೇಟೆಗಳಲ್ಲಿ ಇಟ್ಟು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.


ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.


ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರಕೊಂಡುಬಂದು - ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರಿಗೆ ಕಾಣಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕ ಪಟ್ಟಿಗಳನ್ನು ಅಗಲಮಾಡುತ್ತಾರೆ, ಗೊಂಡೆಗಳನ್ನು ಉದ್ದಮಾಡುತ್ತಾರೆ.


ಹೀಗಿರುವದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಬರುವಾಗ್ಗೆ ಅವನ ನೆರಳು ಇವರಲ್ಲಿ ಯಾವನ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.


ಯೇಸು ಎದ್ದು ತನ್ನ ಶಿಷ್ಯರನ್ನು ಕರಕೊಂಡು ಅವನ ಹಿಂದೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು