Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:22 - ಕನ್ನಡ ಸತ್ಯವೇದವು J.V. (BSI)

22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುನ್ ಫಾಟಿ ಪರ್ತುನ್ ತಿಕಾ ಬಗಟ್ಲ್ಯಾನ್ ಅನಿ, “ಮಾಜ್ಯಾ ಲೆಕಿ, ಧೈರೊ ಘೆ! ತುಜ್ಯಾ ವಿಶ್ವಾಸಾನ್ ತಿಯಾ ಬರಿ ಹೊಲೆ”. ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚೊ ರೊಗ್ ಅರಾಮ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:22
15 ತಿಳಿವುಗಳ ಹೋಲಿಕೆ  

ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು.


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು.


ಎದ್ದು ಹೋಗು. ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.


ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.


ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು.


ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ - ನೀವು ನಂಬಿದಂತೆ ನಿಮಗೆ ಆಗಲಿ ಅಂದನು.


ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.


ಆಗ ನಿನ್ನ ಮಗನು ಬದುಕುತ್ತಾನೆಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದಾಯಿತೆಂದು ತಂದೆಯು ತಿಳುಕೊಂಡದರಿಂದ ಅವನೂ ಅವನ ಮನೆಯವರೆಲ್ಲರೂ ಆತನನ್ನು ನಂಬಿದರು.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -


ಯೇಸು ಅವನನ್ನು ಗದರಿಸಲು ದೆವ್ವ ಅವನನ್ನು ಬಿಟ್ಟುಹೋಯಿತು; ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.


ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು