Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:27 - ಕನ್ನಡ ಸತ್ಯವೇದವು J.V. (BSI)

27 ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ದೊಗೆ ಜಾನಾ ಕುಡ್ಡೆ ಜೆಜುಚ್ಯಾ ಫಾಟ್ನಾ ಯೆವ್ನಗೆತ್ “ಜೆಜು, ದಾವಿದಾಚ್ಯಾ ಲೆಕಾ ಅಮ್ಚಿ ದಯಾ ಕರ್” ಮನುನ್ ಬೊಬ್ ಮಾರುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:27
24 ತಿಳಿವುಗಳ ಹೋಲಿಕೆ  

ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಸ್ವಾಮೀ, ನನ್ನ ಮಗನನ್ನು ಕರುಣಿಸು; ಅವನು ಮೂರ್ಛಾರೋಗದಿಂದ ಬಹಳ ಕಷ್ಟಪಡುತ್ತಾನೆ; ಆಗಾಗ್ಗೆ ಬೆಂಕಿಯಲ್ಲಿಯೂ ಆಗಾಗ್ಗೆ ನೀರಿನಲ್ಲಿಯೂ ಬೀಳುತ್ತಿರುವನು.


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು.


ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ ಎಂದು ಆರ್ಭಟಿಸಿದರು.


ಮತ್ತು ಇವನನ್ನು ಕೊಲ್ಲಬೇಕೆಂದು ಆಗಾಗ್ಗೆ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯಮಾಡು ಅಂದನು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ಆಗ ಆತನು - ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?


ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು ಎಂದು ಕೂಗಿ ಹೇಳಿದರು.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಆತನು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು - ನಾನು ಇದನ್ನು ಮಾಡಬಲ್ಲೆನೆಂಬದನ್ನು ನಂಬುತ್ತೀರೋ ಎಂದು ಕೇಳಿದ್ದಕ್ಕೆ ಅವರು - ಹೌದು, ಸ್ವಾಮೀ, ನಂಬುತ್ತೇವೆ ಅಂದರು.


ಅವರು ಯೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನ ಹಿಂದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು