Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:30 - ಕನ್ನಡ ಸತ್ಯವೇದವು J.V. (BSI)

30 ಆಗ ಅವರಿಗೆ ಕಣ್ಣು ಬಂದವು. ಮತ್ತು ಯೇಸು ಅವರಿಗೆ - ಇದು ಯಾರಿಗೂ ತಿಳಿಯಬಾರದು ನೋಡಿರಿ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕೂಡಲೇ ಅವರಿಗೆ ದೃಷ್ಟಿ ಬಂದಿತು. “ಈ ವಿಷಯವನ್ನು ಯಾರಿಗೂ ಹೇಳಬಾರದು” ಎಂದು ಯೇಸು ಅವರಿಗೆ ಎಚ್ಚರಿಕೆ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತಾಬೊಡ್ತೊಬ್ ತೆಂಚ್ಯಾ ಡೊಳ್ಯಾಕ್ನಿ ದಿಸ್ಟ್ ಯೆಲಿ. ತನ್ನಾ ಜೆಜುನ್ ತೆಂಕಾ, “ಹೆ ಕೊನಾಕ್ಬಿ ಸಾಂಗುನಕಾಸಿ!” ಮನುನ್ ತಾಕಿತ್ ದಿವ್ನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:30
13 ತಿಳಿವುಗಳ ಹೋಲಿಕೆ  

ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಆಕೆಯ ತಂದೆತಾಯಿಗಳು ಬೆರಗಾದರು. ಆತನು - ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಖಂಡಿತವಾಗಿ ಹೇಳಿದನು.


ಅವರು ಬಹಳ ಆಶ್ಚರ್ಯದಿಂದ ಬೆರಗಾದರು. ಆಮೇಲೆ ಆತನು ಅವರಿಗೆ - ಇದು ಯಾರಿಗೂ ತಿಳಿಯಬಾರದೆಂದು ಬಹು ಖಂಡಿತವಾಗಿ ಹೇಳಿ ಆ ಹುಡುಗಿಗೆ ಊಟಮಾಡಿಸಿರಿ ಅಂದನು.


ಅವರು ಆ ಬೆಟ್ಟದಿಂದ ಇಳಿದುಬರುತ್ತಿರುವಾಗ ಯೇಸು ಅವರಿಗೆ - ನೀವು ಈಗ ಕಂಡ ದರ್ಶನವನ್ನು ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬೇಡಿರೆಂದು ಖಂಡಿತವಾಗಿ ಹೇಳಿದನು.


ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಆದರೆ ಆತನು ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು