Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:31 - ಕನ್ನಡ ಸತ್ಯವೇದವು J.V. (BSI)

31 ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಆ ಕುರುಡರು ಅಲ್ಲಿಂದ ಹೊರಟುಹೋಗಿ ಯೇಸುವಿನ ಸುದ್ದಿಯನ್ನು ಆ ಪ್ರದೇಶದ ಸುತ್ತಮುತ್ತಲೆಲ್ಲಾ ಹಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಖರೆ ತೆನಿ ಜಾವ್ನ್ ತ್ಯಾ ದೆಶಾತ್ ಸಗ್ಳ್ಯಾಕ್ಡೆ ಜೆಜುಚ್ಯಾ ವಿಶಯಾತ್ಲಿ ಖಬರ್ ಮಾಳ್ಬರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:31
11 ತಿಳಿವುಗಳ ಹೋಲಿಕೆ  

ಆಗ ಆತನು - ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಹಬ್ಬಿಸಿದರು.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ


ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಎಲ್ಲೆಲ್ಲಿಯೂ ಹಬ್ಬಿತು.


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ತಿರಿಗಿ ಗಲಿಲಾಯಕ್ಕೆ ಹೋದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.


ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹಬ್ಬಿತು.


ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮತಮ್ಮ ಜಾಡ್ಯಗಳನ್ನು ವಾಸಿ ಮಾಡಿಸಿಕೊಳ್ಳುವದಕ್ಕೂ ಗುಂಪುಗುಂಪಾಗಿ ನೆರೆದರು.


ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು