Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:35 - ಕನ್ನಡ ಸತ್ಯವೇದವು J.V. (BSI)

35 ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಜು ಸಗ್ಳ್ಯಾ ಶಾರಾತ್ನಿ ಅನಿ ಗಾಂವಾತ್ನಿ ಗೆಲೊ, ಸಿನಾಗೊಗಾತ್ನಿ ತೆನಿ ಶಿಕ್ವುಲ್ಯಾನ್ ಅನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಸಗ್ಳ್ಯಾ ಸಿಕ್ ಲೊಕಾಕ್ನಿ, ಅನಿ ದುಕ್ನಿಲಾಗಲ್ಲ್ಯಾಕ್ನಿ ಅರಾಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:35
12 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ಪೇಟೆಗಳಲ್ಲಿ ಇಟ್ಟು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.


ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.


ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.


ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು