ಮತ್ತಾಯ 9:6 - ಕನ್ನಡ ಸತ್ಯವೇದವು J.V. (BSI)6 ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಪಾರ್ಶ್ವವಾಯುರೋಗಿಯನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸಲು ಭೂಲೋಕದಲ್ಲಿ ಅಧಿಕಾರವಿದೆ ಎಂಬುದನ್ನು ನಾನು ನಿಮಗೆ ನಿರೂಪಿಸುತ್ತೇನೆ” ಎಂದನು. ನಂತರ ಯೇಸು ಪಾರ್ಶ್ವವಾಯು ರೋಗಿಗೆ, “ಎದ್ದು, ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಮನೆಗೆ ಹೋಗು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆಜಾಲ್ಯಾರ್ ಹ್ಯಾ ಜಗಾತ್ ಪಾಪ್ ಮಾಪ್ ಕರ್‍ತಲೊ ಅದಿಕಾರ್ ಮಾನ್ಸಾಚ್ಯಾ ಲೆಕಾಕ್ ಹಾಯ್ ಮನ್ತಲೆ ಖರೆ ಕರುನ್ ಮಿಯಾ ತುಮ್ಕಾ ದಾಕ್ವುನ್ ದಿತಾ ಮನುನ್ ಸಾಂಗುನ್, ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, “ವೈರ್ ಉಟ್, ತುಜೆ ಹಾತ್ರಾನ್ ಘೆ, ಅನಿ ತುಜ್ಯಾ ಘರಾಕ್ ಚಲ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |