ಮಲಾಕಿ 1:10 - ಕನ್ನಡ ಸತ್ಯವೇದವು J.V. (BSI)10 ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ. ಅಧ್ಯಾಯವನ್ನು ನೋಡಿ |