Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:11 - ಕನ್ನಡ ಸತ್ಯವೇದವು J.V. (BSI)

11 ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:11
65 ತಿಳಿವುಗಳ ಹೋಲಿಕೆ  

ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಮೂಡಲಿಂದ ಪಡುವಲ ತನಕ ಇರುವವರೆಲ್ಲರೂ ಇದನ್ನು ನೋಡಿ ನನ್ನ ವಿನಹ ಯಾರೂ ಇಲ್ಲ, ನಾನೇ ಯೆಹೋವನು,


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,


ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನನ್ನ ಪ್ರಾರ್ಥನೆಯು ಧೂಪದಂತೆಯೂ ನಾನು ಕೈಯೆತ್ತುವದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನರ ಗುಂಪೆಲ್ಲಾ ಹೊರಗೆ ನಿಂತು ದೇವರನ್ನು ಪ್ರಾರ್ಥಿಸುತ್ತಿರಲಾಗಿ


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಆಗ ಎಲ್ಲರು ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.


ಯೆಹೋವನು ಅವರಿಗೆ ಭಯಂಕರವಾಗುವನು; ಲೋಕದ ದೇವರುಗಳನ್ನೆಲ್ಲಾ ಕ್ಷಯಿಸಿಬಿಡುವನು; ಸಮಸ್ತ ಜನರು, ಅಂದರೆ ಸಮುದ್ರ ಪ್ರಾಂತದ ನಿವಾಸಿಗಳಾದ ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಯೆಹೋವನ ನಾಮವು ಮೂಡಣಿಂದ ಪಡುವಣವರೆಗೂ ಸ್ತುತಿಹೊಂದಲಿ.


ಇದಲ್ಲದೆ ನಿಮಗೆ ಹೇಳುವದೇನಂದರೆ ಮೂಡಣ ಪಡುವಣ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಎಂಬವರ ಸಂಗಡ ಊಟಕ್ಕೆ ಕೂಡ್ರುವರು;


ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು.


ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ನಿನ್ನ ಹೆಸರು ಯಾವಾಗಲೂ ಜ್ಞಾಪಕದಲ್ಲಿರುವಂತೆ ನಾನು ಮಾಡುವೆನು; ಆದದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಹೊಗಳುವರು.


ದೇವರೇ, ನಾವು ನಿನ್ನ ಆಲಯದಲ್ಲಿ ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ ಲೋಕವೆಲ್ಲಾ ನಿನ್ನನ್ನು ಹೊಗಳುವದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.


ಆ ದಿನದಲ್ಲಿ ನೀವು ಹೇಳುವದೇನಂದರೆ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ, ಆತನ ನಾಮವು ಉನ್ನತೋನ್ನತವೆಂದು ಜ್ಞಾಪಕಪಡಿಸಿರಿ.


ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ.


ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.


[ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ ತಾಮ್ರ ಮಣ್ಣು ಬೆಳ್ಳಿ ಬಂಗಾರಗಳನ್ನು ಚೂರುಚೂರುಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ; ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ; ಕನಸು ನಿಜ, ಅದರ ಅರ್ಥವು ನಂಬತಕ್ಕದು ಎಂದು ಹೇಳಿದನು.


ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವತೆಗಳಲ್ಲಿ ಆತನೇ ಭಯಂಕರನು.


ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ ಯೆಹೂದಸೀಮೆಯ ನಿವಾಸಿಗಳು ಆನಂದಪಡಲಿ.


ನೀನು ನಮ್ಮ ದೇಶವನ್ನು ಕಟಾಕ್ಷಿಸಿ ಅದರ ಮೇಲೆ ಮಳೆಸುರಿಸಿ ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂವಿುಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.


ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.


ಮತ್ತು ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು; ಹೌದು, ಯಜ್ಞನೈವೇದ್ಯಗಳ ಸೇವೆಯನ್ನಾಚರಿಸಿ ಯೆಹೋವನಿಗೆ ಹರಕೆಮಾಡಿಕೊಂಡು ಅದನ್ನು ನೆರವೇರಿಸುವರು.


ಇಗೋ, ಯೆಹೋವನಾಮಧೇಯನು ದೂರದಿಂದ ಬರುತ್ತಾನೆ; ಆತನ ಕೋಪವು ಉರಿಯುತ್ತಿದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿ;


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು