Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:13 - ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:13
28 ತಿಳಿವುಗಳ ಹೋಲಿಕೆ  

ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು.


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು


[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?


ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು?


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ಅದು ಕುಂಟಾಗಿ ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಕೂಡದು; ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು.


ಅದು ಅವನ ಜೀವನವಷ್ಟೆ. ತಾನಾಗಿ ಸತ್ತುಬಿದ್ದದ್ದನ್ನಾಗಲಿ ಕಾಡುಮೃಗದಿಂದ ಕೊಲ್ಲಲ್ಪಟ್ಟದ್ದನ್ನಾಗಲಿ ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ


ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ, ಕೊಳ್ಳೆಯನ್ನೂ ಅನ್ಯಾಯವನ್ನೂ ದ್ವೇಷಿಸುತ್ತೇನೆ; ಸತ್ಯಸಂಧತೆಯನ್ನು ಅನುಸರಿಸಿ ಇವರ ನಷ್ಟಕ್ಕೆ ಪ್ರತಿಫಲವನ್ನು ಕೊಟ್ಟು ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದಿ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು