Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:3 - ಕನ್ನಡ ಸತ್ಯವೇದವು J.V. (BSI)

3 ಆದರೆ ನಾನು ಯಾಕೋಬನನ್ನು ಪ್ರೀತಿಸಿ ಏಸಾವನನ್ನು ದ್ವೇಷಿಸಿ ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಕಾಡುನರಿಗಳ ಪಾಲುಮಾಡಿದೆನಷ್ಟೆ; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:3
26 ತಿಳಿವುಗಳ ಹೋಲಿಕೆ  

ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.


ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.


ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು; ನಿಮ್ಮಲ್ಲಿ ಗೆಯ್ಯುವರು, ಬಿತ್ತುವರು;


ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.


ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.


ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬೈಲುಮಾಡಿದ್ದೇನೆ, ಅವಿತುಕೊಳ್ಳಲಾರನು; ಅವನ ಸಂತಾನದವರೂ ಸಹೋದರರೂ ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಬೆಂಗಾಡು ಸರೋವರವಾಗುವದು; ಒಣನೆಲದಲ್ಲಿ ಬುಗ್ಗೆಗಳುಕ್ಕುವವು; ನರಿಗಳು ಮಲಗುತ್ತಿದ್ದ ಹಕ್ಕೆಯು ಆಪುಜಂಬುಗಳ ಪ್ರದೇಶವಾಗುವದು.


ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.


ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ಹೀಗಿರಲು ಯೆಹೋವನು ಎದೋವಿುನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವದು.


ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.


ಚೀಯೋನೆಂಬ ಯುವತಿಯೇ, ನಿನ್ನ ದೋಷಫಲವೆಲ್ಲಾ ಅನುಭವಿಸಿ ತೀರಿತು, ಯೆಹೋವನು ನಿನ್ನನ್ನು ಇನ್ನು ಸೆರೆಗೆ ಒಯ್ಯನು; ಎದೋಮೆಂಬ ಯುವತಿಯೇ, ನಿನ್ನ ದೋಷದ ನಿವಿುತ್ತ ಯೆಹೋವನು ನಿನ್ನನ್ನು ದಂಡಿಸಿ ನಿನ್ನ ಪಾಪಗಳನ್ನು ಬೈಲಿಗೆ ತರುವನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ತೇಮಾನ್ ಸೀಮೆಗಿದ್ದ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು