Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:1 - ಕನ್ನಡ ಸತ್ಯವೇದವು J.V. (BSI)

1 ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೇನಾಧೀಶ್ವರ ಸರ್ವೇಶ್ವರ ಯಾಜಕರಿಗೆ ಹೀಗೆ ಹೇಳುತ್ತಾರೆ: “ನಿಮಗೆ ನಾನು ನೀಡುವ ಆಜ್ಞೆಯಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯಾಜಕರೇ, ನನ್ನ ಮಾತನ್ನು ಕೇಳಿರಿ. ನಾನು ಹೇಳುವುದಕ್ಕೆ ಗಮನ ಕೊಡಿರಿ. ಈ ನಿಯಮಗಳನ್ನು ನಿಮಗಾಗಿ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಈಗ ಯಾಜಕರೇ, ಈ ಎಚ್ಚರಿಕೆ ನಿಮಗಾಗಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:1
6 ತಿಳಿವುಗಳ ಹೋಲಿಕೆ  

ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು