Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:10 - ಕನ್ನಡ ಸತ್ಯವೇದವು J.V. (BSI)

10 ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:10
50 ತಿಳಿವುಗಳ ಹೋಲಿಕೆ  

ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು. ಆತನ ಪ್ರಜೆಯೂ ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲಕಾರಣನು; ನಾವು ಆತನಿಗಾಗಿ ಉಂಟಾದೆವು. ಮತ್ತು ನಮಗೆ ಒಬ್ಬನೇ ಕರ್ತ; ಆತನು ಯೇಸು ಕ್ರಿಸ್ತನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು, ನಾವೂ ಆತನ ಮುಖಾಂತರ ಉಂಟಾದೆವು.


ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಇದಲ್ಲದೆ ಅಣ್ಣನು ತಮ್ಮನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು - ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವಾಸ್ತ್ಯವಾಗಿ ಸಿಕ್ಕಿತಲ್ಲಾ; ಅದು ಬಹುಜನರಾದ ನಮಗೆ ಸ್ವಾಸ್ತ್ಯವಾಗಿ ಸಿಕ್ಕಿದ್ದು ಏನು ದೊಡ್ಡದು ಅಂದುಕೊಳ್ಳುತ್ತಿದ್ದಾರೆ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ನಿನ್ನನ್ನು ನಿರ್ಮಾಣಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ - ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ನಾನು ಯೆಹೋವನು, ನಿಮ್ಮ ಸದಮಲಸ್ವಾವಿುಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಹೊಟ್ಟೆಯಲ್ಲಿ ರೂಪಿಸಿದನಲ್ಲವೇ.


ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿಸಿ ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.


ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಏನು ಪಡಕೊಂಡನೆಂದು ಹೇಳಬೇಕು?


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡೇನೆಂದು ಉಲ್ಲಾಸಪಟ್ಟನು; ಅದನ್ನು ನೋಡಿ ಸಂತೋಷಗೊಂಡನು ಅಂದನು.


ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು


ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಏನಂದರೆ - ನಾನು ಐಗುಪ್ತ್ಯರಿಗೆ ಏನು ಮಾಡಿದೆನೋ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ನನ್ನ ಸ್ಥಳಕ್ಕೆ ಹೇಗೆ ಸೇರಿಸಿದೆನೋ ಇದನ್ನೆಲ್ಲಾ ನೀವು ನೋಡಿದ್ದೀರಷ್ಟೆ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.


ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು