Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:15 - ಕನ್ನಡ ಸತ್ಯವೇದವು J.V. (BSI)

15 ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:15
39 ತಿಳಿವುಗಳ ಹೋಲಿಕೆ  

ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.


ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.


ಸಭೆಯ ಹಿರಿಯನು ನಿಂದಾರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರು ದುರ್ಮಾರ್ಗಸ್ಥರೆನಿಸಿಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವರಾಗಲಿ ಆಗಿರಬಾರದು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾಣೆ,


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿ ಅವಳ ಮಾರ್ಗದಲ್ಲಿ ನಡೆಯಬೇಡ.


ನಿನ್ನ ಹೃದಯವು ಅವಳ ಬೆಡಗನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣು ರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಯೆಹೋವನ ಸೇವೆಯಿಂದ ತಪ್ಪಿಸಿ ಇತರ ದೇವರುಗಳನ್ನು ಪೂಜಿಸುವದಕ್ಕೆ ತಿರುಗಿಸಾರು; ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶ ಮಾಡುವನು.


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ಆದರೆ ಜಾರತ್ವವು ಪ್ರಬಲವಾಗಿರುವದರಿಂದ ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿಯು ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


ನೀವು ಪ್ರವಾದಿಗಳ ಶಿಷ್ಯರೂ ದೇವರು ನಮ್ಮ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ - ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ - ಪವಿತ್ರಾತ್ಮವರವನ್ನು ತಕ್ಕೊಳ್ಳಿರಿ;


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ಅವರ ಮಕ್ಕಳಲ್ಲಿ ಅರ್ಧಮಂದಿ ಯೂದಾಯ ಭಾಷೆಯಲ್ಲಿ ಮಾತಾಡಲರಿಯದೆ ಅಷ್ಡೋದ್ಯ ಮುಂತಾದ ಜನರ ಭಾಷೆಯನ್ನಾಡುತ್ತಾರೆಂದು ತಿಳಿಯಲು


ಇಸ್ರಾಯೇಲ್‍ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕೂತುಕೊಂಡಿದ್ದೆನು;


ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.


ಅವಳು - ಕುಡಿಯಪ್ಪಾ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ ಅನ್ನುವಳೋ, ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ನಿಕೆಯಾಗಿರಲಿ ಅಂದೆನು.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಯೆಹೋವನು ಈ ಸ್ತ್ರೀಯ ಮೂಲಕ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆಯು ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆಗೆ ಸಮಾನವಾಗಲಿ ಅಂದರು.


ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.


ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು