ಮಲಾಕಿ 2:6 - ಕನ್ನಡ ಸತ್ಯವೇದವು J.V. (BSI)6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅನ್ಯಾಯವೇನೂ ಕಾಣಲಿಲ್ಲ; ಅವರು ಶಾಂತಿಯಿಂದಲೂ ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹುಜನರನ್ನು ಪಾಪದ ಕಡೆಯಿಂದ ತಿರುಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಲೇವಿಯು ಸುಳ್ಳನ್ನು ಸಮರ್ಥಿಸದೆ ಸತ್ಯ ಬೋಧನೆಯನ್ನು ಬೋಧಿಸಿದನು. ಅವನು ಪ್ರಮಾಣಿಕನಾಗಿದ್ದು ಸಮಾಧಾನವನ್ನು ಪ್ರೀತಿಸುತ್ತಿದ್ದನು. ಲೇವಿಯು ನನಗೆ ವಿಧೇಯನಾಗಿದ್ದು ಎಷ್ಟೋ ಮಂದಿ ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ನನ್ನ ಶಿಕ್ಷೆಯಿಂದ ಪಾರುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸತ್ಯ ಬೋಧನೆಯು ಅವನ ಬಾಯಲ್ಲಿ ಇತ್ತು. ಸುಳ್ಳು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ, ನ್ಯಾಯದಿಂದಲೂ ನನ್ನ ಸಂಗಡ ನಡೆದುಕೊಂಡು, ಅನೇಕರನ್ನು ಪಾಪದ ಕಡೆಯಿಂದ ತಿರುಗಿಸಿದನು. ಅಧ್ಯಾಯವನ್ನು ನೋಡಿ |