ಮಲಾಕಿ 2:9 - ಕನ್ನಡ ಸತ್ಯವೇದವು J.V. (BSI)9 ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮಶಾಸ್ತ್ರೋಪದೇಶದಲ್ಲಿ ಮುಖದಾಕ್ಷಿಣ್ಯವನ್ನು ತೋರಿಸಿದ್ದರಿಂದ ನಾನಂತು ನಿಮ್ಮನ್ನು ಎಲ್ಲಾ ಜನರ ಮುಂದೆ ಮಾನಗೆಟ್ಟವರನ್ನಾಗಿಯೂ ಕೀಳಾದವರನ್ನಾಗಿಯೂ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.” ಅಧ್ಯಾಯವನ್ನು ನೋಡಿ |