Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:10 - ಕನ್ನಡ ಸತ್ಯವೇದವು J.V. (BSI)

10 ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:10
35 ತಿಳಿವುಗಳ ಹೋಲಿಕೆ  

ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.


ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು.


ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.


ನೀವು ಬಹುದಿವಸದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅಂದದರಿಂದ ದೇವರ ಮನುಷ್ಯನು ಅವನಿಗೆ - ನೀನು ಅದನ್ನು ಕಣ್ಣಾರೆ ಕಾಣುವಿ; ಆದರೆ ಅನುಭವಿಸುವದಿಲ್ಲ ಎಂದು ನುಡಿದಿದ್ದನು.


ದ್ರಾಕ್ಷೆ, ಅಂಜೂರ, ದಾಳಿಂಬರ, ಒಲೀವ, ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿವಸ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.


ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲ್ಯರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಭಾಗಗಳನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು.


ಮಳೆ ತುಂಬಿದ ಮೋಡಗಳು ಭೂವಿುಯ ಮೇಲೆ ಸುರಿದುಬಿಡುವವು; ಮರವು ತೆಂಕಣಕ್ಕಾಗಲಿ ಬಡಗಣಕ್ಕಾಗಲಿ ಬಿದ್ದರೆ ಬಿದ್ದ ಹಾಗೆಯೇ ಇರುವದು.


ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -


ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.


ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.


ಅವರ ಬಿನ್ನಹವನ್ನು ಲಾಲಿಸಿ ಅವರಿಗೆ ಹೀಗೆ ಹೇಳಿದನು - ಇಗೋ, ನಾನು ಧಾನ್ಯದ್ರಾಕ್ಷಾರಸತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ; ಅವುಗಳಿಂದ ನಿಮಗೆ ತೃಪ್ತಿಯಾಗುವದು; ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡೆನು;


ಕಣಗಳಲ್ಲಿ ಗೋದಿಯು ರಾಶಿರಾಶಿಯಾಗಿರುವದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.


ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು