Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:13 - ಕನ್ನಡ ಸತ್ಯವೇದವು J.V. (BSI)

13 ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:13
24 ತಿಳಿವುಗಳ ಹೋಲಿಕೆ  

ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಏನು! ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವಿಯೋ?


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ನಾವು ಆತನ ಕೆಲಸವನ್ನು ನೋಡಬೇಕು, ಅದನ್ನು ಬೇಗನೆ ನಡಿಸಲಿ, ಇಸ್ರಾಯೇಲ್ಯರ ಸದಮಲಸ್ವಾವಿುಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಸಮೀಪಿಸಿ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


ಧರ್ಮಕ್ಕೆ ದೂರರಾದ ಹಟಗಾರರೇ, ನನ್ನ ಮಾತಿಗೆ ಕಿವಿಗೊಡಿರಿ;


ಆದರೆ ನಾವು ಗಗನದ ಒಡತಿಗೆ ಧೂಪಹಾಕುವದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ಮೇಲಕ್ಕೆ ಮಾತ್ರ ತಿರುಗಿಕೊಳ್ಳುವದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ; ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿವಿುತ್ತ ಖಡ್ಗಹತರಾಗಿ ಬೀಳುವರು; ಅವರ ಪತನವು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವದು.


ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಬಾಯಿಂದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು