Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:16 - ಕನ್ನಡ ಸತ್ಯವೇದವು J.V. (BSI)

16 ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:16
64 ತಿಳಿವುಗಳ ಹೋಲಿಕೆ  

ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೇರೇಪಿಸೋಣ.


ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ


ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.


ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿತೀರಿಸುವ ತನಕ ಸುಮ್ಮನಿರಲಾರೆನು;


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಯೆಹೋವನು ಆನಂದಿಸುವದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ ನೀನು ಅರಿಯದೆ ಇರುವಂಥದು ಒಂದೂ ಇಲ್ಲ.


ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸ್ಥಾಪನೆಯಾದದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿದರು. ಆ ಸಂಗತಿಯು ರಾಜನ ದಿನಚರ್ಯಪುಸ್ತಕದಲ್ಲಿ ಬರೆಯಲ್ಪಟ್ಟಿತು.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನದಾಗಿ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ ಆತನು ಅವನಿಗೆ -


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಾನು ಬದುಕಿರುವವರೆಗೂ ಯೆಹೋವನನ್ನು ಕೀರ್ತಿಸುತ್ತಿರುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಭಜಿಸುತ್ತಿರುವೆನು.


ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೇಕಳುಹಿಸಿದನು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವದನ್ನು ಕೇಳೇ ಕೇಳಿದ್ದೇನೆ - ನೀನು ನನ್ನನ್ನು ಶಿಕ್ಷಿಸಿದ್ದೀ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು; ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ದೇವರು ನನ್ನ ಸಂಗಡ ಇರುವದು ನಿಶ್ಚಯ; ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಪಲಾಯನ ಮಾಡುವರು.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು