Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:17 - ಕನ್ನಡ ಸತ್ಯವೇದವು J.V. (BSI)

17 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಹೇಳುವುದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:17
40 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಯಾಹುವು ಯಾಕೋಬನ ವಂಶದವರಾದ ಇಸ್ರಾಯೇಲ್ಯರನ್ನು ಸ್ವಕೀಯಜನವನ್ನಾಗಿ ಆದುಕೊಂಡನಲ್ಲಾ.


ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.


ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು.


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ.


ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು