ಮಲಾಕಿ 3:2 - ಕನ್ನಡ ಸತ್ಯವೇದವು J.V. (BSI)2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ. ಅಧ್ಯಾಯವನ್ನು ನೋಡಿ |