ಮಲಾಕಿ 3:7 - ಕನ್ನಡ ಸತ್ಯವೇದವು J.V. (BSI)7 ನಿಮ್ಮ ಪಿತೃಗಳ ಕಾಲದಿಂದಲೂ ನೀವು ನನ್ನ ವಿಧಿಗಳಿಗೆ ಓರೆಯಾದಿರಿ, ಅವುಗಳನ್ನು ಅನುಸರಿಸಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಯಾವ ವಿಷಯದಲ್ಲಿ ತಿರುಗೋಣವೆನ್ನುತ್ತೀರಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.