Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:1 - ಕನ್ನಡ ಸತ್ಯವೇದವು J.V. (BSI)

1 ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:1
37 ತಿಳಿವುಗಳ ಹೋಲಿಕೆ  

ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಅವನ ಬುಡವು ಕೆಳಗೆ ಒಣಗುವದು, ಅವನ ರೆಂಬೆಯು ಮೇಲೆ ಬಾಡುವದು.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಆಹಾ, [ಚೀಯೋನೇ!] ಯೆಹೋವನು ನೇವಿುಸಿದ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವದು.


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನಗೆದುರಾಗಿ ನಿಲ್ಲುವವರನ್ನು ಕೆಡವಿಬಿಡುತ್ತೀ, ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಭಸ್ಮ ಮಾಡುತ್ತದೆ.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.


ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.


ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.


ಆ ದಿನದಲ್ಲಿ ಸಂತೋಷಪಡಿರಿ, ಕುಣಿದಾಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು ಎಂದು ತಿಳುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.


ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿ ಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯತೀರಿಸುವೆನು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು