Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:4
25 ತಿಳಿವುಗಳ ಹೋಲಿಕೆ  

ಆ ಸಂಗತಿಗಳು ಯಾವವಂದರೆ - ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ - ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ ಎಂದು ಹೇಳಿದ ದಿನದ ವಿಷಯಗಳೇ.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಯೆಹೋವನು ಧರ್ಮಸ್ವರೂಪನಾಗಿರುವದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಆತನನ್ನು ಮರೆಯುವವರೂ ಆಗಬೇಡಿರಿ, ನೋಡಿರಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು