Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:15 - ಕನ್ನಡ ಸತ್ಯವೇದವು J.V. (BSI)

15 ಕಾಲ ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು, ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ ಎಂದು ದೇವರ ಸುವಾರ್ತೆಯನ್ನು ಸಾರಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಕಾಲ ಪರಿಪೂರ್ಣವಾಯಿತು. ದೇವರ ರಾಜ್ಯ ಸಮೀಪಿಸಿತು. ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಸುವಾರ್ತೆಯನ್ನು ನಂಬಿರಿ” ಎಂಬ ದೇವರ ಸುವಾರ್ತೆಯನ್ನು ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ “ಎಳ್ ಯೆಲೊ,ದೆವಾಚೆ ರಾಜ್ ಜಗ್ಗೊಳ್ ಯೆಲಾ, ತುಮ್ಚೆ ಪಾಪ್ ಒಳ್ಕುನ್ ಘೆವಾ, ಅನಿ ದೆವಾಕ್ಡೆ ಫಾಟಿ ಪರ್ತಾ, ಅನಿ ದೆವಾಚ್ಯಾ ಬರ್ಯಾ ಖಬ್ರೆ ವರ್ತಿ ವಿಶ್ವಾಸ್ ಕರಾ” ಮನುನ್ ದೆವಾಚ್ಯಾ ರಾಜಾಚಿ ಬರಿ ಖಬರ್ ಲೊಕಾಕ್ನಿ ಸಾಂಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:15
17 ತಿಳಿವುಗಳ ಹೋಲಿಕೆ  

ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಅಲ್ಲಿರುವ ರೋಗಿಗಳಿಗೆ ವಾಸಿಮಾಡಿ ಅವರಿಗೆ - ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದದೆ ಎಂದು ಹೇಳಿರಿ.


ಪರಲೋಕರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ನಿಮ್ಮ ಊರಿಂದ ನಮ್ಮ ಕಾಲುಗಳಿಗೆ ಹತ್ತಿದ ಧೂಳನ್ನೂ ಒರಸಿಬಿಡುತ್ತೇವೆ; ಅದು ನಿಮಗೇ ಇರಲಿ; ಆದಾಗ್ಯೂ ದೇವರ ರಾಜ್ಯವು ಸಮೀಪಕ್ಕೆ ಬಂದದೆ ಎಂದು ನಿಮಗೆ ತಿಳಿದಿರಲಿ ಎಂಬದಾಗಿ ಹೇಳಿರಿ.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಬಿಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು