ಮಾರ್ಕ 1:19 - ಕನ್ನಡ ಸತ್ಯವೇದವು J.V. (BSI)19 ಇನ್ನೂ ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಇನ್ನೂ ತಿರುಗಾಡುತ್ತಲೇ ಇದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ಕಂಡನು. ಅವರು ಮೀನುಗಳನ್ನು ಹಿಡಿಯಲು ಬಲೆಯನ್ನು ಸಿದ್ಧಪಡಿಸುತ್ತಾ ತಮ್ಮ ದೋಣಿಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜೆಜು ಥೈತ್ನಾ ಅನಿ ಉಲ್ಲೆ ಫಿಡೆ ಗೆಲೊ, ತನ್ನಾ ತೆಕಾ ಜೆಬೆದೆವಾಚಿ ಪೊರಾ, ಜಾಕೊಬ್ ಅನಿ ತೆಚೊ ಭಾವ್ ಜುವಾಂವ್ ದಿಸ್ಲೆ. ತೆನಿ ಢೊನಿತ್ ಬಸುನ್, ಅಪ್ಲಿ ಜಾಳಿ ಸಮಾ ಕರುಕ್ ಲಾಗಲ್ಲೆ. ಅಧ್ಯಾಯವನ್ನು ನೋಡಿ |