Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:22 - ಕನ್ನಡ ಸತ್ಯವೇದವು J.V. (BSI)

22 ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜು ದೆವಾಚ್ಯಾ ಗೊಸ್ಟಿಯಾ, ಎವ್ಡೆ ಬರೆ ಸಾಂಗ್ತಲೆ ಆಯ್ಕುನ್, ಲೊಕಾ ಅಜಾಪ್ ಹೊಲಿ. ಕಶ್ಯಾಕ್ ಮಟ್ಲ್ಯಾರ್, ತೊ ತೆಂಚ್ಯಾ ಖಾಯ್ದೆ ಸಿಕ್ವುತಲ್ಯಾ ಲೊಕಾಂಚ್ಯಾ ಸರ್ಕೆ ಶಿಕ್ವಿನಸಿ, ಎಕ್ ಅದಿಕಾರ್ ಹೊತ್ತ್ಯಾ ಮಾನ್ಸಾ ಸರ್ಕೆ ಶಿಕ್ವುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:22
14 ತಿಳಿವುಗಳ ಹೋಲಿಕೆ  

ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.


ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.


ನಾಚಿಕೆಯನ್ನು ಹುಟ್ಟಿಸುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಕೆಡಿಸದೆ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಸಜ್ಜನರೆಂದು ಪ್ರತಿಮನುಷ್ಯನ ಮನಸ್ಸು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.


ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು