Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:24 - ಕನ್ನಡ ಸತ್ಯವೇದವು J.V. (BSI)

24 ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನಜರೇತಿನ ಯೇಸುವೇ! ನಮ್ಮಿಂದ ನಿನಗೆ ಏನಾಗಬೇಕಾಗಿದೆ? ನಮ್ಮನ್ನು ನಾಶಗೊಳಿಸಲು ಬಂದಿರುವೆಯಾ? ನೀನು ದೇವರಿಂದ ಬಂದ ಪರಿಶುದ್ಧನೆಂದು ನನಗೆ ಗೊತ್ತಿದೆ!” ಎಂದು ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ಜೆಜುಕ್ ಬಗುನ್ “ನಜರೆತಾಚ್ಯಾ ಜೆಜು! ತಿಯಾ ಅಮ್ಚ್ಯಾ ಖಬ್ರೆಕ್ ಕಶ್ಯಾಕ್ ಯೆಲೆ? ಅಮ್ಕಾ ನಾಸ್ ಕರುಕ್ ಮನುನ್ ಯೆಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್. ತಿಯಾ ದೆವಾಕ್ನಾ ಯೆಲ್ಲೊ ಎಕ್ಲೊ ಪವಿತ್ರ್” ಮನುನ್ ಬೊಬ್ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:24
25 ತಿಳಿವುಗಳ ಹೋಲಿಕೆ  

ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.


ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ನಾವು ಐಗುಪ್ತದೇಶದಲ್ಲಿದ್ದಾಗಲೇ - ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು ಎಂಬದಾಗಿ ನಿನಗೆ ಹೇಳಲಿಲ್ಲವೇ? ನಾವು ಅರಣ್ಯದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವದೇ ವಾಸಿಯಲ್ಲವೇ ಎಂದು ಹೇಳಿದರು.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.


ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟು ಹೋಗು ಎನ್ನಲಾಗಿ


ಅವನು ಕುರುಡ ಭಿಕ್ಷಗಾರನು. ಈ ಮಾರ್ಗವಾಗಿ ಹೋಗುವವನು ನಜರೇತಿನ ಯೇಸುವೆಂದು ಅವನು ಕೇಳಿ - ದಾವೀದನ ಕುಮಾರನೇ, ಯೇಸುವೇ, ನನ್ನನ್ನು ಕರುಣಿಸು ಎಂದು ಕೂಗಿಕೊಳ್ಳುವದಕ್ಕೆ ಪ್ರಾರಂಭಿಸಿದನು.


ಅವನು ಚಳಿಕಾಯಿಸಿಕೊಳ್ಳುತ್ತಿರುವದನ್ನು ಕಂಡು ಅವನನ್ನು ನೋಡಿ - ನೀನು ಸಹ ಆ ನಜರೇತಿನವನಾದ ಯೇಸುವಿನ ಕೂಡ ಇದ್ದವನು ಅಂದಳು.


ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.


ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು