Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:8 - ಕನ್ನಡ ಸತ್ಯವೇದವು J.V. (BSI)

8 ನಾನು ನಿಮಗೆ ನೀರಿನ ಸ್ನಾನ ಮಾಡಿಸಿದೆನು; ಆತನಾದರೋ ನಿಮಗೆ ಪವಿತ್ರಾತ್ಮದ ಸ್ನಾನಮಾಡಿಸುವನು ಎಂದು ಸಾರಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಟ್ಟೆನು; ಅವರಾದರೋ ನಿಮಗೆ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಕೊಡುವರು,” ಎಂದು ಘೋಷಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಆತನು ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾನೆ” ಎಂದು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ, ಖರೆ, ತೊ ತುಮ್ಕಾ ದೆವಾಚ್ಯಾ ಅತ್ಮ್ಯಾನುಚ್ ಬಾಲ್ತಿಮ್ ದಿತಾ." ಮನುನ್ ಥೈ ಗೊಳಾ ಹೊಲ್ಲ್ಯಾ ಲೊಕಾಕ್ನಿ ತೊ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:8
19 ತಿಳಿವುಗಳ ಹೋಲಿಕೆ  

ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಅವನು - ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಬಾರನ್ನು ಬೊಗ್ಗಿಕೊಂಡು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ.


ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು.


ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಅದಕ್ಕೆ ಯೋಹಾನನು - ನಾನು ನೀರಿನಿಂದ ಸ್ನಾನಮಾಡಿಸುವವನು; ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;


ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು