Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:1 - ಕನ್ನಡ ಸತ್ಯವೇದವು J.V. (BSI)

1 ಅಲ್ಲಿಂದ ಆತನು ಎದ್ದು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರಿಗಿ ಗುಂಪು ಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರಿಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಜೆಜು ತೊ ಜಾಗೊ ಸೊಡುನ್ ಜುದೆಯಾ ಪ್ರಾತ್ಯಾಕ್ ಅನಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಯಾ ದಂಡೆಕ್ ಗೆಲೊ.ಅನಿಬಿ ಸುಮಾರ್ ಲೊಕಾ ತೆಚ್ಯಾ ಫಾಟ್ನಾ ಯೆಲಿ. ಸದ್ದಿಚ್ಯಾ ಬಾಸೆನ್ ಜೆಜುನ್ ತೆಂಕಾ ಶಿಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:1
17 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಯೊರ್ದನ್‍ಹೊಳೆಯ ಆಚೆ ಯೋಹಾನನು ಮೊದಲು ಸ್ನಾನಮಾಡಿಸುತ್ತಿದ್ದ ಸ್ಥಳಕ್ಕೆ ತಿರಿಗಿ ಹೋಗಿ ಅಲ್ಲಿ ಇದ್ದನು.


ಆ ಜನರೆಲ್ಲರು ಸಮುದ್ರದ ಹತ್ತರ ನೆಲದ ಮೇಲೆ ಇದ್ದರು. ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶ ಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ -


ಬಳಿಕ ಶಿಷ್ಯರಿಗೆ - ತಿರಿಗಿ ಯೂದಾಯಕ್ಕೆ ಹೋಗೋಣ ಎಂದು ಹೇಳಿದನು.


ಆತನು ಹೊರಗೆ ಬಂದು ಬಹುಜನರ ಗುಂಪನ್ನು ಕಂಡು ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಬಹಳ ಉಪದೇಶ ಮಾಡುತ್ತಿದ್ದನು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.


ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.


ಆತನು ಹೊರಟು ತಿರಿಗಿ ಸಮುದ್ರದ ಬಳಿಗೆ ಹೋದನು. ಜನರ ಗುಂಪೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶಮಾಡಿದನು.


ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್‍ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.


ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡುವದಕ್ಕೆ ಪ್ರಾರಂಭಿಸಿದನು. ಎಲ್ಲರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಮಾತುಗಳು ಎಲ್ಲಿಂದ ಬಂದಿದ್ದಾವು? ಇವನು ಪಡೆದಿರುವ ಈ ಜ್ಞಾನವೇನು? ಇವನ ಕೈಯಿಂದ ಇಂಥ ಮಹತ್ಕಾರ್ಯಗಳಾಗುವದೇನು?


ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.


ಯೇಸು ದೇವಾಲಯದಲ್ಲಿ ಉಪದೇಶ ಮಾಡುತ್ತಿರಲಾಗಿ ಪ್ರಶ್ನೆಮಾಡಿ - ಶಾಸ್ತ್ರಿಗಳು ಬರಬೇಕಾದ ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?


ನಾನು ದಿನಾಲು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಶಾಸ್ತ್ರ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು