Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:17 - ಕನ್ನಡ ಸತ್ಯವೇದವು J.V. (BSI)

17 ಆತನು ಹೊರಟು ದಾರಿಹಿಡಿದು ಹೋಗುವಾಗ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು ಆತನನ್ನು ಕೇಳಲಾಗಿ ಯೇಸು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜು ಥೈತ್ನಾ ಜಾವ್ಕ್ ಮನುನ್ ತಯಾರ್ ಹೊವ್ಕ್ ಲಾಗಲ್ಲೊ, ತನ್ನಾ ಎಕ್ ಮಾನುಸ್ ಪಳುನ್ ಯೆವ್ನ್ ಜೆಜುಚ್ಯಾ ಇದ್ರಾಕ್ ಡೊಗ್ಲಾ ಟೆಕುನ್ “ಬರ್‍ಯಾ ಗುರುಜಿ, ನಿರಂತರ್ ಜಿವನ್ ಮಾಕಾ ಗಾವುಚೆ ತರ್, ಮಿಯಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:17
28 ತಿಳಿವುಗಳ ಹೋಲಿಕೆ  

ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವದಕ್ಕಾಗಿ - ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಕೇಳಲು


ಮತ್ತು ಅವರನ್ನು ಹೊರಗೆ ಕರಕೊಂಡು ಬಂದು - ಸ್ವಾವಿುಗಳೇ, ನಾನು ರಕ್ಷಣೆಹೊಂದುವದಕ್ಕೆ ಏನು ಮಾಡಬೇಕೆಂದು ಕೇಳಲು


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ ವಂದಿಸಿ -


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಇವರು ಬಂದು - ಬೋಧಕನೇ, ನೀನು ಸತ್ಯವಂತನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ,


ಆಗ ಯೇಸು ಜನರ ಗುಂಪು ಓಡಿಬರುವದನ್ನು ಕಂಡು ಆ ದೆವ್ವವನ್ನು ಗದರಿಸಿ - ಎಲೇ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟುಹೋಗು; ಇನ್ನು ಮುಂದೆ ಹಿಡಿಯಬೇಡವೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ ಅಂದನು.


ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ -


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೇಯವನಲ್ಲ.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು