Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:23 - ಕನ್ನಡ ಸತ್ಯವೇದವು J.V. (BSI)

23 ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ನೋಡಿ, “ಧನವಂತನು ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಸುತ್ತಲೂ ನೋಡಿ ತಮ್ಮ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾನಾ ಜೆಜುನ್ ಭೊತ್ಯಾನಿ ಬಗುನ್ ಶಿಸಾಕ್ನಿ “ಎಕ್ ಸಾವ್ಕಾರಾಕ್ ದೆವಾಚ್ಯಾ ರಾಜ್ಜ್ಯಾತ್ ಪ್ರವೆಸ್ ಕರ್‍ತಲೆ ಕವ್ಡೆ ಕಸ್ಟ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:23
13 ತಿಳಿವುಗಳ ಹೋಲಿಕೆ  

ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.


ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ?


ಆಗ ಯೇಸು ಅವನನ್ನು ನೋಡಿ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟದಿದ್ದರೆ ದೇವರ ರಾಜ್ಯಕ್ಕೆ ಸೇರಲಾರನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ


ಆದರೆ ಆತನು ಈ ಕೆಲಸ ಮಾಡಿದವಳನ್ನು ಕಾಣಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ


ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು ಅಪರಂಜಿಗೆ ನಿನ್ನನ್ನೇ ನಂಬಿದ್ದೇನೆ ಎಂದು ಹೇಳಿದ್ದರೆ


ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಮೋರೆ ಬಾಡಿದವನಾಗಿ ದುಃಖದಿಂದ ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು