Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:26 - ಕನ್ನಡ ಸತ್ಯವೇದವು J.V. (BSI)

26 ಈ ಮಾತಿಗೆ ಅವರು ಇನ್ನಷ್ಟಾಶ್ಚರ್ಯಪಟ್ಟು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ತಮ್ಮ ತಮ್ಮೊಳಗೆ ಹೇಳಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯ ಆಯಿತು. “ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಶಿಷ್ಯರು ಇನ್ನೂ ಬೆರಗಾಗಿ, ಒಬ್ಬರಿಗೊಬ್ಬರು, “ಹಾಗಾದರೆ ರಕ್ಷಣೆಹೊಂದಲು ಯಾರಿಗೆ ಸಾಧ್ಯ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಶಿಸಾ ಅನಿ ಉಲ್ಲಿ ಅಜಾಪ್ ಹೊಲಿ ಅನಿ “ತಸೆ ಹೊಲ್ಯಾರ್, ಕೊನ್ ರಕ್ಷನ್ ಹೊತಾ?” ಮನುನ್ ಬೊಲುನ್ಗೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:26
9 ತಿಳಿವುಗಳ ಹೋಲಿಕೆ  

ಅವರು - ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು ಎಂದು ಹೇಳಿ ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು.


ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದ ಮೇಲೆ ಗಾಳಿ ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹಳವಾಗಿ ಬೆರಗಾದರು.


ಈ ಮಾತನ್ನು ಕೇಳಿದವರು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ಕೇಳಲು


ಆ ಕಾಲದಲ್ಲಿ ಒಬ್ಬನು - ಸ್ವಾಮೀ, ರಕ್ಷಣೆ ಹೊಂದುವವರು ಸ್ವಲ್ಪಜನರೋ ಎಂದು ಕೇಳಲು


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜೀಕಣ್ಣಿನಲ್ಲಿ ನುಗ್ಗಿ ಹೋಗುವದು ಸುಲಭ ಎಂದು ಹೇಳಿದನು.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ; ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು