Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:27 - ಕನ್ನಡ ಸತ್ಯವೇದವು J.V. (BSI)

27 ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ; ದೇವರಿಗೆ ಎಲ್ಲವು ಸಾಧ್ಯವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಶಿಷ್ಯರ ಕಡೆಗೆ ನೋಡಿ, “ಇದು ಮನುಷ್ಯರಿಗಷ್ಟೇ ಅಸಾಧ್ಯ, ದೇವರಿಗಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜೆಜುನ್ ತೆಂಕಾ ಬಗುನ್ “ಮಾನ್ಸಾಕ್ ಹೆ ಸಾದ್ಯ್ ನಾ ಹೊಯ್, ಖರೆ ದೆವಾಕ್ ಅಸಾದ್ಯ ಮನ್ತಲೆ ಕಾಯ್‍ ಬಿ ನಾ” ದೆವಾಕ್ ಸಗ್ಳೆಬಿ ಸಾದ್ಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:27
15 ತಿಳಿವುಗಳ ಹೋಲಿಕೆ  

ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.


ಆತನು - ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ ಅಂದನು.


ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ? ಇದು ಸೇನಾಧೀಶ್ವರ ಯೆಹೋವನ ನುಡಿ.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆತನು ತನ್ನ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯದ ಹೊರತಾಗಿ ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.


ಈ ಮಾತಿಗೆ ಅವರು ಇನ್ನಷ್ಟಾಶ್ಚರ್ಯಪಟ್ಟು - [ಹೀಗಿದ್ದರೆ] ಯಾರಿಗೆ ರಕ್ಷಣೆಯಾದೀತು ಎಂದು ತಮ್ಮ ತಮ್ಮೊಳಗೆ ಹೇಳಿಕೊಳ್ಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು