Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:37 - ಕನ್ನಡ ಸತ್ಯವೇದವು J.V. (BSI)

37 ನಿನಗೆ ಮಹಾಪದವಿ ಬಂದಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಮಾಡಬೇಕು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು,” ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ತೆನಿ “ತಿಯಾ ವೈಭವಾನ್ ತುಜ್ಯಾ ರಾಜ್ಜ್ಯಾತ್ ಸಿವಾಸನಾರ್ ಬಸ್ತಾನಾ, ಅಮ್ಕಾ ದೊಗ್ಯಾಕ್ನಿ ಎಕ್ಲ್ಯಾಕ್ ತುಜ್ಯಾ ಉಜ್ವ್ಯಾ ಬಾಜುಕ್ ಅನಿ ಅನ್ಯೆಕ್ಲ್ಯಾಕ್ ಡಾವ್ಯಾ ಬಾಜುಕ್ ಬಸುಕ್ ಅವ್ಕಾಸ್ ಕರುನ್ ದಿ” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:37
10 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫಿರ್ ದೇಶದ ಬಂಗಾರದ ಆಭರಣಗಳಿಂದ ಭೂಷಿತಳಾಗಿ ನಿನ್ನ ಬಲಭಾಗದಲ್ಲಿ ನಿಂತಿರುವಳು.


ಆತನು ಅವರನ್ನು - ನಿಮಗೇನು ನಡಿಸಿಕೊಡಬೇಕು ಎಂದು ಕೇಳಲು ಅವರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು