Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:38 - ಕನ್ನಡ ಸತ್ಯವೇದವು J.V. (BSI)

38 ಆದರೆ ಯೇಸು ಅವರನ್ನು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವದು ನಿಮ್ಮಿಂದಾದೀತೇ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವದು ನಿಮ್ಮಿಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅದಕ್ಕೆ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು ಆಗುತ್ತದೆ,” ಎಂದು ಅವರು ಮರು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ನೀವೂ ಕುಡಿಯುವಿರೋ? ನಾನು ಪಡೆಯಲಿರುವ ದೀಕ್ಷಾಸ್ನಾನವನ್ನು ನೀವೂ ಪಡೆಯುವಿರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಜೆಜುನ್ ತುಮಿ ಕಾಯ್ ಇಚರುಲ್ಯಾಸಿ ಮನುನ್ ತುಮ್ಕಾ ಗೊತ್ತ್ ನಾ, ಮಿಯಾ ಫಿತಲೆ ಹಾಯ್ ತ್ಯಾ ಸಂಕಟಾಚ್ಯಾ ಆಯ್ದಾನಾತ್ಲೆ ತುಮ್ಚ್ಯಾನ್ ಫಿವ್ಕ್ ಹೊತಾ ಕಾಯ್? ಮಿಯಾ ಘೆತಲೆ ಹಾಯ್ ತೆ ಬಾಲ್ತಿಮ್ ತುಮ್ಚ್ಯಾನ್ ಘೆವ್ಕ್ ಹೊತಾ ಕಾಯ್?" ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:38
14 ತಿಳಿವುಗಳ ಹೋಲಿಕೆ  

ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು.


ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ; ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಅಂದನು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ - ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ; ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ ಎಂದು ಉತ್ತರಕೊಟ್ಟನು.


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು