Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:4 - ಕನ್ನಡ ಸತ್ಯವೇದವು J.V. (BSI)

4 ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಫಾರಿಜೆವಾನಿ “ಎಕ್ಲ್ಯಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಪತ್ರ್ ಲಿವ್ನ್ ದಿವ್ನ್ ಸೊಡುನ್ ದಿವ್ಕ್ ಹೊತಾ ಮನುನ್ ಮೊಯ್ಜೆನ್ ಸಾಂಗ್ಲ್ಯಾನಾಯ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:4
7 ತಿಳಿವುಗಳ ಹೋಲಿಕೆ  

ಅವರು ಆತನನ್ನು - ಹಾಗಾದರೆ ತ್ಯಾಗಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಯಾಕೆ ಆಜ್ಞೆಕೊಟ್ಟನು ಎಂದು ಕೇಳಲು


ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಆತನು ಅದಕ್ಕೆ - ಮೋಶೆ ನಿಮಗೆ ಏನು ಆಜ್ಞೆಕೊಟ್ಟನು ಅನ್ನಲಾಗಿ ಅವರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು