Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:40 - ಕನ್ನಡ ಸತ್ಯವೇದವು J.V. (BSI)

40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕೂತುಕೊಳ್ಳುವಂತೆ ಅನುಗ್ರಹಮಾಡುವದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಖರೆ ಮಾಜ್ಯಾ ಉಜ್ವ್ಯಾಕ್ ಅನಿ ಮಾಜ್ಯಾ ಡಾವ್ಯಾಕ್ ಕೊನ್-ಕೊನ್ ಬಸ್ತಲೆ ಮನುನ್ ನಿರ್‍ದಾರ್ ಘೆತಲೊ ಅದಿಕಾರ್ ಮಾಕಾ ನಾ, ಜೆ ಕೊನಾಕ್ ತೆ ಜಾಗೆ ತಯಾರ್ ಕರುನ್ ಥವಲ್ಲೆ ಹಾತ್, ತೆಂಕಾ ತೆ ಜಾಗೆ ರಾಕುನ್ ಥವಲ್ಲೆ ಹಾತ್, ತೆ ದೆವುಚ್ ತೆಂಕಾ ದಿತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:40
7 ತಿಳಿವುಗಳ ಹೋಲಿಕೆ  

ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು