Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:45 - ಕನ್ನಡ ಸತ್ಯವೇದವು J.V. (BSI)

45 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತಸೆಚ್ ಮಾನ್ಸಾಚೊ ಲೆಕ್ ಲೊಕಾನಿಕ್ನಾ ಸೆವಾ ಕರುನ್ ಘೆವ್ಕ್ ಯೆವ್ಕ್ ನಾ, ಸೆವಾ ಕರುಕ್ ಅನಿ ಅಪ್ನಾಚೊ ಜಿವ್ ದಿವ್ನ್ ಸುಮಾರ್ ಜನಾಕ್ನಿ ಸುಟ್ಕಾ ಕರುಕ್ ಮನುನ್ ಯೆಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:45
16 ತಿಳಿವುಗಳ ಹೋಲಿಕೆ  

ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಕರ್ತನೂ ಗುರುವೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದಿರಲಾಗಿ ನೀವು ಸಹ ಒಬ್ಬರ ಕಾಲನ್ನು ಒಬ್ಬರು ತೊಳೆಯುವ ಹಂಗಿನವರಾಗಿದ್ದೀರಿ.


ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.


ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು