Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:47 - ಕನ್ನಡ ಸತ್ಯವೇದವು J.V. (BSI)

47 ಅವನು ಕುರುಡ ಭಿಕ್ಷಗಾರನು. ಈ ಮಾರ್ಗವಾಗಿ ಹೋಗುವವನು ನಜರೇತಿನ ಯೇಸುವೆಂದು ಅವನು ಕೇಳಿ - ದಾವೀದನ ಕುಮಾರನೇ, ಯೇಸುವೇ, ನನ್ನನ್ನು ಕರುಣಿಸು ಎಂದು ಕೂಗಿಕೊಳ್ಳುವದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಜರೇತಿನ ಯೇಸು ಆ ಮಾರ್ಗವಾಗಿ ಹೋಗುತ್ತಿದ್ದಾನೆಂದು ಅವನು ಕೇಳಿ, “ಯೇಸುವೇ, ದಾವೀದನ ಕುಮಾರನೇ, ದಯವಿಟ್ಟು ನನ್ನನ್ನು ಕರುಣಿಸು!” ಎಂದು ಗಟ್ಟಿಯಾಗಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ನಜರೆತಾಚೊ ಜೆಜು ಥೈತ್ನಾ ಜಾವ್ಕ್ ಲಾಗ್ಲಾ ಮನುನ್ ಆಯ್ಕುನ್, “ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್!” ಮನುನ್ ಜೊರಾನ್ ಬೊಬ್ ಮಾರುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:47
24 ತಿಳಿವುಗಳ ಹೋಲಿಕೆ  

ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.


ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.


ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೊರಟುಹೋದಾಗ ಮತ್ತೊಬ್ಬಳು ಅವನನ್ನು ಕಂಡು ಅಲ್ಲಿರುವವರಿಗೆ - ಇವನೂ ನಜರೇತಿನ ಯೇಸುವಿನ ಕೂಡ ಇದ್ದವನು ಎಂದು ಹೇಳಿದಳು.


ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.


ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.


ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು.


ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.


ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಆಗ ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು, ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ - ಸ್ವಾಮೀ, ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗಿಕೊಂಡರು.


ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು